ಗೃಹ ಜ್ಯೋತಿ: ನಕಲಿ ಲಿಂಕ್‌ಗಳ ಬಗ್ಗೆ ಬೆಸ್ಕಾಂ ಎಚ್ಚರಿಕೆ: ಈ ಲಿಂಕ್‌ ಮಾತ್ರ ಬಳಸಿ : Beware, consumers! Do not click on fake websites/links named Seva Sindhu : Bescom

ಗೃಹ ಜ್ಯೋತಿ: ನಕಲಿ ಲಿಂಕ್‌ಗಳ ಬಗ್ಗೆ ಬೆಸ್ಕಾಂ ಎಚ್ಚರಿಕೆ: ಈ ಲಿಂಕ್‌ ಮಾತ್ರ ಬಳಸಿ : Beware, consumers! Do not click on fake websites/links named Seva Sindhu : Bescom

Beware, consumers! Do not click on fake websites/links named Seva Sindhu.

ಗ್ರಾಹಕರಿಗೆ ಬೆಸ್ಕಾಂ ಮನವಿ ನಕಲಿ ಲಿಂಕ್‌ಗಳು ಹರಿದಾಡುತ್ತಿರುವ ಬಗ್ಗೆ ಮಾಹಿತಿ ತಿಳಿದ ಬಳಿಕ ಬೆಸ್ಕಾಂ ಕೂಡ ಗ್ರಾಹಕರಿಗೆ ಎಚ್ಚರಿಕೆ ವಹಿಸುವಂತೆ ಮನವಿ ಮಾಡಿದೆ. ಅಧಿಕೃತ ವಬ್‌ಸೈಟ್‌ನಲ್ಲಿ ಮಾತ್ರ ನೋಂದಣಿ ಮಾಡಿಕೊಳ್ಳುವಂತೆ ಮನವಿ ಮಾಡಿದೆ. ಇನ್ನು ನೋಂದಣಿ ಮಾಡಲು ಗೊತ್ತಿರುವವರು, ಅಕ್ಕ ಪಕ್ಕದವರಿಗೆ, ಗೊತ್ತಿಲ್ಲದವರಿಗೆ ನೋಂದಣಿ ಮಾಡಲು ಸಹಾಯ ಮಾಡುವಂತೆ ಮನವಿ ಮಾಡಿದೆ. ಸೋಶಿಯಲ್‌ ಮಿಡಿಯಾದಲ್ಲಿ ವೈರಲ್ ಆಗುತ್ತಿವೆ ನಕಲಿ ವಿದ್ಯುತ್ ಬಿಲ್: ಗ್ರಾಹಕರಿಗೆ ಬೆಸ್ಕಾಂ ಎಚ್ಚರಿಕೆ https://sevasindhugs.karnataka.gov.in/ ಈ ವೆಬ್‌ಸೈಟ್‌ನಲ್ಲಿ ಮಾತ್ರ ನೀವು ಗೃಹಜ್ಯೋತಿ ಯೋಜನೆಗೆ ನೋಂದಣಿ ಮಾಡಿಕೊಳ್ಳಬೇಕು. ಸಾಕಷ್ಟು ಜನ ಈ ನೋಂದಣಿ ಮಾಡುತ್ತಿರುವ ಕಾರಣ, ಕೆಲವೊಮ್ಮೆ ಸರ್ವರ್ ಬ್ಯುಸಿ ಬರುತ್ತದೆ. ಹಾಗಂತ ನೀವು ಇನ್ಯಾವುದೋ ವೆಬ್‌ಸೈಟ್‌ಗೆ ತೆರಳಿದರೆ ನಿಮ್ಮ ಆಧಾರ್, ಗ್ರಾಹಕರ ಐಡಿ ವಿವರಗಳು ಸೈಬರ್ ಕಳ್ಳರ ಪಾಲಾಗಲಿವೆ.

ಗೃಹಲಕ್ಷ್ಮಿ, ಯುವ ನಿಧಿ ನೋಂದಣಿ ಬಗ್ಗೆ ಇರಲಿ ಜಾಗ್ರತೆ ಗೃಹ ಜ್ಯೋತಿ ಯೋಜನೆಯಲ್ಲಿ ನೀವು ಆಧಾರ್, ಮೊಬೈಲ್ ಸಂಖ್ಯೆ, ಗ್ರಾಹಕರ ಐಡಿ ವಿವರಗಳನ್ನು ಮಾತ್ರ ನೀಡಬೇಕು. ಆದರೆ ಗೃಹ ಲಕ್ಷ್ಮೀ ಯೋಜನೆ ಮತ್ತು ಯುವ ನಿಧಿ ಯೋಜನೆಗೆ ಅರ್ಜಿ ಸಲ್ಲಿಸುವಾಗ ನಿಮ್ಮ ಬ್ಯಾಂಕ್ ಖಾತೆ, ಆಧಾರ್ ನಂಬರ್ ಸೇರಿದಂತೆ ಹಲವು ಮಹತ್ವದ ಮಾಹಿತಿ ನೀಡಬೇಕಾಗುತ್ತದೆ. ಗೃಹ ಲಕ್ಷ್ಮಿ ಮತ್ತು ಯುವ ನಿಧಿ ಯೋಜನೆಗೆ ಇನ್ನೂ ಅರ್ಜಿ ಸ್ವೀಕರಿಸುತ್ತಿಲ್ಲ. ವಾಟ್ಸಾಪ್ ಸೇರಿದಂತೆ ಹಲವು ಕಡೆ ಬರುವ ಸುಳ್ಳು ಮಾಹಿತಿಗೆ ಮರುಳಾಗಿ ನಕಲಿ ಲಿಂಕ್‌ಗಳ ಮೇಲೆ ಕ್ಲಿಕ್ ಮಾಡಿ, ವಿವರಗಳನ್ನು ನಮೂದಿಸಿದರೆ ವಂಚಕರು ನಿಮ್ಮ ಬ್ಯಾಂಕ್‌ ಖಾತೆಗೆ ಕನ್ನ ಹಾಕುವ ಅಪಾಯ ಹೆಚ್ಚಾಗಿದೆ. ಅಧಿಕೃತ ಆದೇಶ ಬರುವವರೆಗೂ ಈ ರೀತಿಯ ಯಾವುದೇ ಲಿಂಕ್‌ಗಳ ಮೇಲೆ ಕ್ಲಿಕ್ ಮಾಡಬೇಡಿ, ಸರ್ಕಾರವೇ ನೋಂದಣಿ ಬಗ್ಗೆ ಸೂಚನೆಗಳನ್ನು ನೀಡಲಿದೆ.

Source : oneindia

Leave a Reply

This site uses Akismet to reduce spam. Learn how your comment data is processed.